ಇಂದು ಬೆಂಗಳೂರಿನಲ್ಲಿ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಸಮಾವೇಶ
ಪುತ್ತೂರು: ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ 50ನೇ ವರ್ಷಾಚರಣೆಯ ಪ್ರಯುಕ್ತ ಗೋಲ್ಡನ್ ಫಿಫ್ಟಿ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆ.10ರಂದು ನಡೆಯಲಿದೆ. ಸಮಾವೇಶಕ್ಕೆ ಎಲ್ಲೆಡೆಯಿಂದ ಜನ ಸಾಗರ ಹರಿದು ಬರುವ ನಿರೀಕ್ಷೆಯಿದೆ.
ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್, ಮುಖ್ಯಮಂತ್ರಿ ಸಿದ್ಧರಾಮಯ್ಯ ಸಹಿತ ಹಲವಾರು ಧಾರ್ಮಿಕ, ಸಾಮಾಜಿಕ, ರಾಜಕೀಯ ನಾಯಕರು, ಚಿಂತಕರು ಭಾಗವಹಿಸಲಿದ್ದಾರೆ.
ಈ ಸಮಾವೇಶದಲ್ಲಿ ವಿವಿಧ ಕಡೆಗಳಿಂದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಮುಸ್ಲಿಂ ಜಮಾಅತ್, ಎಸ್‌ವೈಎಸ್ ನಾಯಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಇಂಡಿಯನ್ ಗ್ರಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಸರಕಾರ ವಿಶೇಷ ಅತಿಥಿಯಾಗಿ ಘೋಷಿಸಿದ್ದು ಸರಕಾರದ ಆತಿಥ್ಯ ಸಿಗಲಿದೆ.
ಗೋಲ್ಡನ್ ಫಿಫ್ಟಿ ಸಮಾವೇಶದ ಸಮಾರೋಪ ಸಮಾರಂಭ ನವಂಬರ್ 23,24,25 ರಂದು ಮುಂಬೈಯ ಏಕತಾ ಮೈದಾನದಲ್ಲಿ ನಡೆಯಲಿದೆ.