ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಅವರೆಲ್ಲಿದ್ದಾರೆ?- ಜೆಡಿಎಸ್ ಕಾಲೆಳೆದ ಕಾಂಗ್ರೆಸ್
ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾತುಕತೆ ನಡೆಸಿ ಒಮ್ಮತಕ್ಕೆ ಬಂದಿದ್ದು ಬಿಜೆಪಿ ನಾಯಕರಾದ ಅಮಿತ್ ಶಾ, ಜೆಪಿ ನಡ್ಡಾ ಜೊತೆಗಿನ ಮಾತುಕತೆ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಇಲ್ಲದ್ದನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಟ್ವೀಟ್ ಮೂಲಕ ಜೆಡಿಎಸ್ ಅನ್ನು ಪ್ರಶ್ನಿಸಿದೆ.
ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಪಕ್ಷದ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಳ್ಳುವುದಕ್ಕೆ ರಾಜ್ಯಾಧ್ಯಕ್ಷರ ಅಭಿಪ್ರಾಯ ಬೇಕಿಲ್ಲವೇ? ಅವರ ಉಪಸ್ಥಿತಿ ಬೇಕಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಅಲ್ಲದೆ, ರಾಜ್ಯಾಧ್ಯಕ್ಷ ಹುದ್ದೆ ಎನ್ನುವುದು ಕುಮಾರಸ್ವಾಮಿಯವರ ಕುಟುಂಬ ಕೈ ಒರೆಸಲು ಇಟ್ಟುಕೊಂಡಿರುವ ಟಿಶ್ಯೂ ಪೇಪರ್ ಮಾತ್ರವೇ? ವಿಮಾನದ ಟಿಕೆಟ್ ಬುಕ್ ಮಾಡಲೊಬ್ಬರು, ಹೋಟೆಲ್ ರೂಮ್ ಬುಕ್ ಮಾಡಲೊಬ್ಬರು ಹಾಗೂ ತಮ್ಮ ಪುತ್ರ ಜೊತೆಗಿದ್ದರೆ ಸಾಕೇ? ಎಂದು ಎಂದು ಕಾಂಗ್ರೆಸ್ ಕುಟುಕಿದೆ