ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಶಾಬು ಸಾಹೇಬ್ ಪಾಲ್ತಾಡ್ ನೇಮಕ
ಪುತ್ತೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಪಿ ಶಾಬು ಸಾಹೇಬ್ ಪಾಲ್ತಾಡ್ ನೇಮಕಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರ ಆದೇಶದ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್, ಸ್ಪೀಕರ್ ಯು.ಟಿ ಖಾದರ್, ಮಾಜಿ ಸಚಿವ ರಮಾನಾಥ ರೈ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮೊದಲಾದವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡರವರು ಪಿ ಶಾಬು ಸಾಹೇಬ್ ಪಾಲ್ತಾಡ್ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.
ಶಾಬು ಸಾಹೇಬ್‌ರವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಧ್ಯಾಕ್ಷರಾಗಿ, ಕೆ.ಪಿ.ಸಿ.ಸಿ ಸೇವಾದಳದ ಸದಸ್ಯರಾಗಿ, ಕೆ.ಪಿ.ಸಿ.ಸಿ ಅಲ್ಪಸಂಖ್ಯಾತರ ಕೋ-ಆರ್ಡಿನೇಟರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಅಲ್ಲದೇ ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಶಾಬು ಸಾಹೇಬ್‌ರವರು ಸಂಗ ಸಂಸ್ಥೆಗಳಲ್ಲೂ ತೊಡಗಿಸಿಕೊಂಡಿದ್ದರು.