ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು: ಎಂಟು ಮಂದಿ ದಾರುಣ ಸಾವು
ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿರುವ ಘಟನೆ
ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅ. 4ರಂದು ಮುಂಜಾನೆ ನಡೆದಿದೆ.

ವಾರಾಣಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದು, 3 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ ಎಂದು ವರದಿಯಾಗಿದೆ.