ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಡಿ.ವಿ ಸದಾನಂದ ಗೌಡ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಡಿ.ವಿ. ಸದಾನಂದ ಗೌಡರ ಈ ನಿರ್ಧಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ” ಎಂದು ತಿಳಿಸಿದರು.
‘ಚುನಾವಣಾ ರಾಜಕೀಯದಲ್ಲಿ ಮುಂದುವರಿಯುವುದಿಲ್ಲ. ನನ್ನ 30 ವರ್ಷಗಳ ರಾಜಕೀಯ ಜೀವನದಲ್ಲಿ ಪಕ್ಷ ನನಗೆ ಎಲ್ಲವನ್ನೂ ನೀಡಿದೆ. ನಾನು 10 ವರ್ಷ ಶಾಸಕನಾಗಿ, 20 ವರ್ಷ ಸಂಸದನಾಗಿ, ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯ ಪಕ್ಷದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಡಿವಿಎಸ್ ಹೇಳಿದರು.