ಉಡುಪಿ: ನಾಲ್ವರ ಹತ್ಯೆ ಪ್ರಕರಣ- ಮಹಜರು ವೇಳೆ ಆರೋಪಿ ಮೇಲೆ ದಾಳಿಗೆ ಮುಂದಾದ ಆಕ್ರೋಶಿತರು
ಉಡುಪಿ: ತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆಯನ್ನು ನೇಜಾರಿನಲ್ಲಿ ಸ್ಥಳ ಮಹಜರಿಗೆ ನ.16ರಂದು ಮಧ್ಯಾಹ್ನ ಕರೆ ತಂದಾಗ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು ಆಕ್ರೋಶಿತ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆ ವರದಿಯಾಗಿದೆ.
ಆರೋಪಿ ಪ್ರವೀಣ್ ಚೌಗಲೆಯನ್ನು ಪೊಲೀಸರು ಸ್ಥಳ ಮಹಜರಿಗೆ ಬಿಗಿ ಭದ್ರತೆಯ ನಡುವೆ ಕರೆತಂದಿದ್ದಾರೆ. ಈ ವೇಳೆ ಜಮಾಯಿಸಿದ್ದ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಆರೋಪಿಯನ್ನು ನಮಗೆ ಒಪ್ಪಿಸಿ ಆತನಿಗೆ ಬದುಕುವ ಹಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನೂ ಕೂಡಲೇ ಕರೆಸಿಕೊಳ್ಳಲಾಗಿದೆ.