ಕರಾವಳಿಕ್ರೈಂ

ಪುತ್ತೂರು: ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಬೇಸರ-ಮನ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು: ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಪ್ಯದಿಂದ ವರದಿಯಾಗಿದೆ.

ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ (17. ವ) ಮೃತ ಯುವತಿ.

ನಿಶಾ ರವರ ಸಹೋದರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದವರು ಬೇಸರದಲ್ಲಿದ್ದು ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದು, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದರು.

ನ.25 ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಶಾ ರವರು ಮೃತಪಟ್ಟಿದ್ದು, ಸದ್ರಿ ಮರಣದಲ್ಲಿ ಬೇರೆ ಯಾವುದೇ ಸಂಶಯವಿರುವುದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!