ಸುಳ್ಯ: ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಅವಾಂತರ ಸೃಷ್ಟಿಸಿದ ಎ.ಪಿ.ಎಂ.ಸಿ ಅಧಿಕಾರಿ..!
ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ವಿಭಾಗದ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು
ಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ ಘಟನೆ ವರದಿಯಾಗಿದೆ.

ಕಂಠ ಪೂರ್ತಿ ಮದ್ಯ ಸೇವಿಸಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ವಾಹನ ಚಲಾಯಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದರು.
ಈ ಸಂದರ್ಭದಲ್ಲಿ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಪರಿಚಯ ಕೇಳಿದಾಗ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯು ನಾನು ಸುಳ್ಯ ಎ.ಪಿ.ಎಂ.ಸಿ.ಯಲ್ಲಿ ಕಾರ್ಯದರ್ಶಿಯಾದ್ದು ನನ್ನದು ತಪ್ಪಾಯಿತೆಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಾತ್ರಿ ಸಮಯದಲ್ಲಿ ಸರಕಾರಿ ವಾಹನವನ್ನು ಮದ್ಯ ಸೇವಿಸಿ ಈ ರೀತಿಯಾಗಿ ಉಪಯೋಗಿಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.