ಡಿಸಿಎಂ ಹುದ್ದೆ ಸೃಷ್ಟಿ: ಗೊಂದಲಕ್ಕೆ ತೆರೆ ಎಳೆದ ಉಸ್ತುವಾರಿ ಸುರ್ಜೇವಾಲ
ಬೆಂಗಳೂರು: ರಾಜ್ಯದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ವಿಚಾರದ ಬಗ್ಗೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.
ಡಿಸಿಎಂ ಹುದ್ದೆ ಸೃಷ್ಟಿ ವಿಚಾರವೆಲ್ಲಾ ಕೇವಲ ಸಿನಿಮೀಯ ರೀತಿಯ ಊಹಾಪೋಹದ ಸುದ್ದಿಯಾಗಿದೆ
ಎಲ್ಲ ಕ್ಷೇತ್ರಗಳಲ್ಲೂ ಜನರ ಕಲ್ಯಾಣಕ್ಕೆ ನಾವು ಒತ್ತು ನೀಡುತ್ತೇವೆ. ಗ್ಯಾರಂಟಿ ಯೋಜನೆ ಜಾರಿ ನಮ್ಮ ಆದ್ಯತೆಯಾಗಿದೆ. ಪ್ರತಿಯೊಂದು ತಾಲೂಕುಗಳಲ್ಲಿ, ವಿಧಾನ ಸಭಾ ಕ್ಷೇತ್ರಗಳಲ್ಲಿ ಆಸ್ಪತ್ರೆ, ರಸ್ತೆ, ಬಸ್ ನಿಲ್ದಾಣಗಳು ಹಾಗೂ ಮೂಲಸೌಕರ್ಯಗಳನ್ನು ಕೊಡುವುದು ನಮ್ಮ ಆದ್ಯತೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.