ಬಿಲ್ಕಿಸ್ ಬಾನು ಪ್ರಕರಣ: ಎಲ್ಲಾ 11 ಅಪರಾಧಿಗಳು ಜ.21ರ ಮೊದಲು ಶರಣಾಗಲು ಸುಪ್ರೀಂ ಕೋರ್ಟ್ ಆದೇಶ
ದೆಹಲಿ: ಬಿಲ್ಕಿಸ್ ಬಾನು ಪ್ರಕರಣದ 11 ದೋಷಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಮತ್ತೆ ಜೈಲಿಗೆ ಹೋಗುವುದಕ್ಕೆ ಮತ್ತಷ್ಟು ಸಮಯ ಅನುಮತಿಸಬೇಕು ಎಂದು ಕೋರಿಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ಪೀಠವು ಅರ್ಜಿಗಳಿಗೆ ಅರ್ಹತೆಯ ಕೊರತೆಯಿದೆ ಮತ್ತು ಜನವರಿ 21ರೊಳಗೆ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ಆದೇಶಿಸಿದೆ.
2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ದೋಷಿಗಳನ್ನು ಗುಜರಾತ್ ಸರ್ಕಾರ ಎರಡು ವರ್ಷಗಳ ಹಿಂದೆ ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿತ್ತು.