ಪುತ್ತೂರು: ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪದಲ್ಲಿ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.