ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಕಾಲೇಜು ವಿದ್ಯಾರ್ಥಿನಿ ಮೃತ್ಯು



ಉಪ್ಪಿನಂಗಡಿ: ಹೃದಯಾಘಾತದಿಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ 34 ನೆಕ್ಕಿಲಾಡಿ ಗ್ರಾಮದ ಕರ್ವೇಲು ಬಳಿ ನಡೆದಿದೆ.


ಕೆ.ಎ. ಸ್ಟೋರ್ ಮಾಲಕ ದಾವೂದ್ ಎಂಬವರ ಪುತ್ರಿ ಹಫೀಝ (17.ವ) ಮೃತ ಬಾಲಕಿ. ಪುತ್ತೂರಿನ ಸೈಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಈಕೆ ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದು, ಫೆ.15ರಂದು ಬೆಳಗ್ಗೆ ಮಲಗಿದ್ದಲ್ಲೇ ಮೃತಪಟ್ಟಿದ್ದಳು. ಮಲಗಿದಲ್ಲೇ ಹೃದಯಾಘಾತಕ್ಕೀಡಾಗಿ ಈಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಮೃತಳು ತಂದೆ, ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾಳೆ.

Leave a Reply

Your email address will not be published. Required fields are marked *

error: Content is protected !!