ಮೈಸೂರು: ಮೌಲಾನ ಹಾಫಿಲ್ ಅಕ್ಮಲ್ ಬರ್ಬರ ಹತ್ಯೆ
ಮೈಸೂರು: ನಗರ ಪಾಲಿಕೆ ಮಾಜಿ ಸದಸ್ಯನ ಸಹೋದರನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ಘಟನೆ ಮಾ.8ರಂದು ರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಪಾಲಿಕೆ ಮಾಜಿ ಸದಸ್ಯ ಅಯಾಜ್ ಪಂಡು ಸಹೋದರ ಮೌಲಾನ ಹಾಫಿಲ್ ಅಕ್ಮಲ್ ಎಂದು ಗುರುತಿಸಲಾಗಿದೆ. ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತ ಸಮೀಪ ಐದಕ್ಕೂ ಹೆಚ್ಚು ಮಂದಿಯ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ ಎಂದುತಿಳಿದುಬಂದಿದೆ.




