ಶಿವಮೊಗ್ಗ: ಬಂಡಾಯ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ ಖಚಿತ
ಶಿವಮೊಗ್ಗ: ಕೆಎಸ್ ಈಶ್ವರಪ್ಪ ಬಂಡಾಯ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ.
ಪುತ್ರ ಕಾಂತೇಶ್ ಅವರಿಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ ಅವರನ್ನು ಬಿಜೆಪಿ ನಾಯಕರು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆಯಾದರೂ ಯಾರ ಮನವೊಲಿಕೆಯೂ ಯಶಸ್ವಿಯಾಗಿಲ್ಲ. ಅಲ್ಲದೇ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಕೂಡಾ ನಿಗದಿ ಮಾಡಿದ್ದಾರೆ.
ನಾನು ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಎ.12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. 25 ಸಾವಿರ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಸೋಲಿನ ಭಯ ಶುರುವಾಗಿದೆ ಎಂದೂ ಈಶ್ವರಪ್ಪ ಹೇಳಿದ್ದು ವಿಧಾನಸಭೆ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಗೆಲುವಿಗಾಗಿ ಶಿಕಾರಿಪುರದ ಕ್ಷೇತ್ರದಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ರಾಜಕಾರಣ ಮಾಡಿದ್ದರು ಎಂದು ಆರೋಪಿಸಿದ್ದಾರೆ.