ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ಹೇಳಿದ್ದಕ್ಕೆ ಹಲ್ಲೆ- ಪೊಲೀಸ್ ದೂರು
ಕಡಬ: ಸಣ್ಣ ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ಹೇಳಿದ್ದಕ್ಕೆ ಕೋಪಗೊಂಡ ಸಂಬಂಧಿಕನೋರ್ವ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ದೂರು ನೀಡಲಾಗಿದ್ದು ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಡಬ ಬಳ್ಪ ನಿವಾಸಿ ರಮೇಶ್ ಕೆ (37ವ.)ಎಂಬವರು ಪೊಲೀಸರಿಗೆ ದೂರು ನೀಡಿದವರು. ನಾನು ಹೆಂಡತಿ ಮತ್ತು ಸಣ್ಣ ಮಗನೊಂದಿಗೆ ಮನೆಯಲ್ಲಿ ವಾಸವಾಗಿದ್ದು, ಮಾ.26ರಂದು ಸಂಜೆ ಮನೆಯಲ್ಲಿರುವಾಗ ಸಂಬಂಧಿಕರಾದ ಆರೋಪಿ ಸುಂದರ ಹೊಸ್ಮಠ ಎಂಬವರು ಮನೆಗೆ ಬಂದು ಕುಳಿತುಕೊಂಡು ಜೋರಾಗಿ ಮಾತನಾಡುತ್ತಿದ್ದರು. ಈ ವೇಳೆ ನಾನು, ಸಣ್ಣ ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ತಿಳಿಸಿದ್ದೆ. ಇದರಿಂದ ಕುಪಿತನಾದ ಆರೋಪಿ ಸುಂದರ ಅವರು ಕತ್ತಿಯಿಂದ ಹಲ್ಲೆ ನಡೆಸಿರುತ್ತಾರೆ.’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಹಲ್ಲೆಯಿಂದಾದ ಗಾಯಕ್ಕೆ ಮಾ.27ರಂದು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿರುವುದಾಗಿಯೂ ರಮೇಶ್ ಅವರು ನೀಡಿದ್ದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.