ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರ್ಪಡೆ
ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಯರಾಂ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ತೇಜಸ್ವಿನಗೌಡ ಮೇಲ್ಮನೆ ಸದಸ್ಯತ್ವಕ್ಕೆ ಕೆಲವೇ ದಿನಗಳ ಮೊದಲು ರಾಜೀನಾಮೆ ನೀಡಿದ್ದರು. ವಿಧಾನಸಭಾಪತಿ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಿದ್ದರು.
ತೇಜಸ್ವಿನಿ ಅವರು ಮೈಸೂರು -ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕ್ಷಾಕ್ಷಿಯಾಗಿದ್ದರು. ಟಿಕೆಟ್ ಕೈ ತಪ್ಪಿದ್ದರಿಂದ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ.