ಸುಮಲತಾ ಅಂಬರೀಶ್, ಕ್ರಿಕೆಟಿಗ ದೊಡ್ಡ ಗಣೇಶ್ ಬಿಜೆಪಿ ಸೇರ್ಪಡೆ
ಬಿಜೆಪಿ ಸೇರುವುದಾಗಿ ಘೋಷಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು (ಎ.5) ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಜೊತೆಗೆ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.





