ಮದ್ಯನೀತಿ ಹಗರಣ: ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ
ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿ.ಆರ್.ಎಸ್ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕೆ ಕವಿತಾ ಅವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು.