ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ
ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಎ.14ರಂದು ಮಂಗಳೂರಿನಲ್ಲಿ ನಡೆಸಲಿರುವ ರೋಡ್ ಶೋ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ
ಈ ಬಗ್ಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು ಈ ಹಿಂದೆ ಸಂಜೆ 7 ಗಂಟೆಗೆ ರೋಡ್ ಶೋ ಸಮಯ ನಿಗದಿಯಾಗಿತ್ತು. ಆದರೆ ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಪ್ರಧಾನಿ ಮೋದಿ 7:45ಕ್ಕೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಾರಾಯಣ ಗುರು ಸರ್ಕಲ್ ಬಳಿ ನಾರಾಯಣ ಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಲಿದ್ದಾರೆ ಎಂದು ಅವರು ತಿಳಿಸಿದರು.