ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ-ಕೆ ಎಸ್ ಈಶ್ವರಪ್ಪ
ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಘೋಷಿಸಿದ್ದಾರೆ.
ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದಿರುವ ಹಿರಿಯ ನಾಯಕರ ಕೆಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಕೆಎಸ್ ಈಶ್ವರಪ್ಪ ಟ್ವೀಟ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.