ಸುಳ್ಯದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುಳ್ಯ ಜೆ ಡಿ ಎಸ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಮಾಜಿ ಸಚಿವ ಹಾಗೂ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಜೆಡಿಎಸ್ ಮುಖಂಡರನ್ನು ಪಕ್ಷಕ್ಕೆ ಬರಮಾಡಿ ಕೊಂಡರು.
ಸುಳ್ಯ ತಾಲೂಕಿನ ಸುಮಾರು 30ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು, ನಗರ ಪಂಚಾಯತಿ ಸದಸ್ಯ ಕೆ ಎಸ್ ಉಮ್ಮರ್, ಸಿದ್ದೀಕ್ ಗೂನಡ್ಕ ರವರು ಹಾಗೂ ಜೆಡಿಎಸ್ ಸುಳ್ಯ ಬ್ಲಾಕ್ ಕಮಿಟಿ ಉಪಾಧ್ಯಕ್ಷ ಹಾಜಿ ಉಮ್ಮರ್ ಗೂನಡ್ಕ, ಜೆಡಿಎಸ್ ಮುಖಂಡರುಗಳಾದ ಅಬ್ದುಲ್ ಹಮೀದ್ ಬೆಳ್ಳಾರೆ, ಎನ್ ಇಸ್ಮಾಯಿಲ್ ಕಲಂಗ, ಎ ಬಿ ಮೋಹಿದೀನ್, ಇಬ್ರಾಹಿಂ ಕೊಳಂಬೆ, ರಫೀಕ್ ಐವ ತ್ತೋಕ್ಲು, ಮುಖಂಡರುಗಳಾದ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಇಕ್ಬಾಲ್ ಎಲಿಮಲೆ ಅವರ ನೇತೃತ್ವದಲ್ಲಿ
ಡಿ ಸಿ ಸಿ ಅಧ್ಯಕ್ಷ ಹರೀಶ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸಾಲೆಂಟ್ ಪಿಂಟೋ, ಕೆ ಪಿ ಸಿ ಸಿ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್, ಕೆ ಪಿ ಸಿ ಸಿ ಸದಸ್ಯ ಜಿ ಕೃಷ್ಣಪ್ಪ, ಅರೆಭಾಷೆ ಅಕಾಡಮಿ ಅಧ್ಯಕ್ಷ ಸದಾನಂದ ಮಾವಂಜಿ ಮೊದಲಾದವರು ಉಪಸ್ಥಿತರಿದ್ದರು.