ಇಂದು ಪುತ್ತೂರಿನಲ್ಲಿ ಬಿಜೆಪಿ ರೋಡ್ ಶೋ- ಅಣ್ಣಾಮಲೈ ಆಗಮನ
ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ|ಬ್ರಿಜೇಶ್ ಚೌಟ ಅವರ ಪರವಾಗಿ ಏ.23ಕ್ಕೆ ಪುತ್ತೂರಿನಲ್ಲಿ ರೋಡ್ ಶೋ ನಡೆಯಲಿದ್ದು ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಭಾಗವಹಿಸಲಿದ್ದಾರೆ.

ಅಣ್ಣಾಮಲೈ ಅವರು ಬೆಳಿಗ್ಗೆ 10.30ಕ್ಕೆ ಪುತ್ತೂರು ದರ್ಬೆ ವೃತ್ತದಿಂದ ಬಸ್ ನಿಲ್ದಾಣದ ತನಕ ರೋಡ್ ಶೋ ನಡೆಸಲಿದ್ದಾರೆ. ಪುತ್ತೂರು ಬಸ್ನಿಲ್ದಾಣದ ಬಳಿ ಅವರು ಚುನಾವಣಾ ಮತಯಾಚನೆ ಮತ್ತು ಭಾಷಣ ಮಾಡಲಿದ್ದಾರೆ. ಪುತ್ತೂರಿನ ಎಲ್ಲಾ 221 ಬೂತ್ಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ.ಮಧ್ಯಾಹ್ನ ಗಂಟೆ 12.30ರ ತನಕ ಈ ಕಾರ್ಯಕ್ರಮ ನಡೆಯಲಿದೆ.