ಎ.28: ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ
ಬೆಂಗಳೂರು: ಲೋಕಸಭಾ ಚುನಾವಣಾ ಕಾವು ರಂಗೇರುತ್ತಿದ್ದು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಏ.28 ಮತ್ತು 29ರಂದು ರಾಜ್ಯಕ್ಕೆ ಮತ್ತೆ ಭೇಟಿ ಕೊಡಲಿದ್ದು, ವಿವಿಧೆಡೆ ಬೃಹತ್ ಪ್ರಚಾರ ಸಭೆಗಳಲ್ಲಿ ಭಾಷಣ ಮಾಡಲಿದ್ದಾರೆ.

ಎ.28ರಂದು ಬೆಳಗಾವಿ, ಶಿರಸಿ,ದಾವಣಗೆರೆ ಹಾಗೂ ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದು ಏ.29ರಂದು ಬಾಗಲಕೋಟೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.