ಮಂಜೇಶ್ವರ: ಅಂಬ್ಯುಲೆನ್ಸ್-ಕಾರು ನಡುವೆ ಭೀಕರ ಅಪಘಾತ: ಮೂವರು ಮೃತ್ಯು
ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ಇಂದು ನಡೆದಿದೆ.

ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ಹಾಗೂ ಚಾಲಕ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಅಪಘಾತ ನಡೆದಿದೆ. ಇಬ್ಬರು ಸ್ಥಳದಲ್ಲೇ, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.