ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ
ನವದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಹೆಚ್ಚಿಸಲಾಗುವುದು ಮತ್ತು ಮುಸ್ಲಿಂ ಮೀಸಲಾತಿಯನ್ನು ರದ್ದುಪಡಿಸಲಾಗುವುದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ತೆಲಂಗಾಣದ ಭೋಂಗಿರ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಾಂಗ್ರೆಸ್ ಕೊಳ್ಳೆ ಹೊಡೆದಿದೆ. ಆ ಮೀಸಲಾತಿಯನ್ನು ಕಾಂಗ್ರೆಸ್ ಮುಸ್ಲಿಮರಿಗೆ ನೀಡಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ಮೂಲಕ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮೀಸಲಾತಿಯನ್ನು ದೋಚಿದೆ. ಎಂದು ಅವರು ಆರೋಪ ಮಾಡಿದ್ದಾರೆ.