ಕ್ರೈಂರಾಜ್ಯ

ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ..!



ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.  ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಯುವಕನೋರ್ವ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ

ವಿರೂಪಾಕ್ಷ ಕೊಲೆ ಮಾಡಿದ ಆರೋಪಿ. ಮೀನಾ ಕೊಲೆಯಾಗಿರುವ ಬಾಲಕಿ. ಅಪ್ರಾಪ್ತ ಬಾಲಕಿಯನ್ನು ವಿವಾಹ ಮಾಡುವದಕ್ಕೆ ಪೋಷಕರು ಮುಂದಾಗಿದ್ದು, ಯುವಕನೊಂದಿಗೆ ಎಂಗೇಜ್ಮೆಂಟ್ ಮಾಡುವ ವೇಳೆ ಸೋಮವಾರಪೇಟೆ ಪೊಲೀಸರು ತಡೆಯೊಡ್ಡಿದ್ದರು ಎನ್ನಲಾಗಿದೆ. ಬಾಲ್ಯವಿವಾಹ ಅಪರಾಧ ಈ ಹಿನ್ನೆಲೆ ಬಾಲಕಿ ವಯಸ್ಕಳಾಗುವವರೆಗೆ ಮದುವೆ ಮಾಡುವಂತಿಲ್ಲ ಎಂದು ನಿಶ್ಚಿತಾರ್ಥ ನಿಲ್ಲಿಸಿದ್ದರು.

ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿದ್ದರೆ ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ವಿರೂಪಾಕ್ಷ ಆಕೆಯನ್ನು ಎಳೆದೊಯ್ದು ಕತ್ತು ಕೊಯ್ದು ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದಾನೆ ಎಂದೂ ಹೇಳಲಾಗುತ್ತಿದೆ.
ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮದುವೆ ರದ್ದು ಮಾಡಲಾಗಿತ್ತು. ಆಕೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. 

Leave a Reply

Your email address will not be published. Required fields are marked *

error: Content is protected !!