ಪ್ರಜ್ವಲ್ ರೇವಣ್ಣಗೆ 6 ದಿನ ಎಸ್ ಐಟಿ ಕಸ್ಟಡಿಗೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೂನ್ 6 ರವರೆಗೆ ಎಸ್ ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಮೇ.30ರಂದು ಮಧ್ಯರಾತ್ರಿ ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಬಂಧಿಸಿದ್ದು, ಮೇ 31ರಂದು ಅವರನ್ನು ವೈದ್ಯಕೀಯ ತಪಾಸಣೆ ಮಾಡಿಸಿ ಬಳಿಕ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆ ಅಗತ್ಯವಿರುವುದರಿಂದ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದೆ. ಎಸ್ ಐಟಿ ಮನವಿ ಪುರಸ್ಕರಿಸಿದ ಕೋರ್ಟ್, ಪ್ರಜ್ವಲ್ ರೇವಣ್ಣನನ್ನು ಏಳು ದಿನ ಎಸ್ ಐಟಿ ಕಸ್ಟಡಿಗೆ ನೀಡಿ ಆದೇಶಿಸಿದೆ.