ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾಗೆ ಪೊಲೀಸ್ ಕಸ್ಟಡಿ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಅವರನ್ನು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದಲ್ಲಿ ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆಸಿಕೊಂಡು ಹತ್ಯೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈಗಾಗಲೇ ಇನ್ನೂ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟ ದರ್ಶನ್ ಹಾಗೂ ಪವಿತ್ರ ಗೌಡ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.