ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಅವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪ್ರತಿಭಟನೆ
ರೇಣುಕಾಸ್ವಾಮಿ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ಅವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ನೀಲಕಂಠೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಪ್ರತಿಭಟನಾಕಾರರು ನಟ ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.