ಬ್ರಿಟನ್ ಸಾರ್ವತ್ರಿಕ ಚುನಾವಣೆ: ಹಾಲಿ ಪ್ರಧಾನಿ ರಿಷಿ ಸುನಕ್’ಗೆ ಸೋಲು!
ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ರಿಷಿ ಸುನಕ್ ಸೋಲೊಪ್ಪಿಕೊಂಡಿದ್ದಾರೆ.
ವಿರೋಧ ಪಕ್ಷ ಲೇಬರ್ ಪಾರ್ಟಿ 300ಕ್ಕೂ ಅಧಿಕ ಸ್ಥಾನ ಗಳಿಸಿದ್ದರೆ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಭಾರತ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ಗೆ ಹೀನಾಯ ಸೋಲಾಗುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ.
ತಮ್ಮ ಪಕ್ಷದ ಸೋಲನ್ನು ಒಪ್ಪಿಕೊಂಡಿರುವ ಇಂಗ್ಲೆಂಡ್ ಪ್ರಧಾನಿ ರಿಶಿ ಸುನಕ್, ಸಾರ್ವರ್ತಿಕ ಚುನಾವಣೆಗಳಲ್ಲಿ ಲೇಬರ್ ಪಕ್ಷ ಗೆಲುವು ಸಾಧಿಸಿದೆ. ಗೆಲುವು ಸಾಧಿಸಿರುವ ಕೀರ್ ಸ್ಟಾರ್ಮರ್ ನೇತೃತ್ವದ ಪಕ್ಷಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.