ಬ್ರಿಟನ್‌ನ ನೂತನ ಪ್ರಧಾನ ಮಂತ್ರಿಯಾಗಿ ಕೀರ್ ಸ್ಟಾರ್ಮರ್ ಆಯ್ಕೆ
ಬ್ರಿಟನ್‌ನ ನೂತನ ಪ್ರಧಾನ ಮಂತ್ರಿಯಾಗಿ ಕೀರ್ ಸ್ಟಾರ್ಮರ್ ಅವರು ಆಯ್ಕೆಯಾಗಿದ್ದಾರೆ. ಕನ್ಸರ್ವೇಟಿವ್ ಪಕ್ಷದ 14 ವರ್ಷಗಳ ಆಳ್ವಿಕೆಯ ಬಳಿಕ ಬ್ರಿಟನ್ ಚುನಾವಣೆಯಲ್ಲಿ ಲೇಬರ್ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ.

ಲೇಬರ್ ಪಕ್ಷವು ಈ ಬಾರಿ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಜಯಭೇರಿ ಬಾರಿಸಿತು. ಕೀರ್ ಸ್ಟಾರ್ಮರ್ ಅವರು ಬಕಿಂಗ್ಹ್ಯಾಮ್ ಅರಮನೆಯಲ್ಲಿ ಕಿಂಗ್ ಚಾರ್ಲ್ಸ್ ರನ್ನು ಭೇಟಿಯಾದ ಬಳಿಕ ಅವರನ್ನು ಸರಕಾರ ರಚಿಸಲು ಆಹ್ವಾನಿಸಲಾಯಿತು ಎಂದು ತಿಳಿದು ಬಂದಿದೆ.