ರಾಜ್ಯ

ಶಾಸಕ ನಾಗೇಂದ್ರ ED   ವಶಕ್ಕೆ



ಬೆಂಗಳೂರು: ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಜೂನ್ 12ರಂದು ಬೆಳಗ್ಗೆ ವಶಕ್ಕೆ ಪಡೆದುಕೊಂಡಿದ್ದಾರೆ.

ಜೂನ್ 10ರಂದು ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕರಾದ ನಾಗೇಂದ್ರ ನಿವಾಸದ ಮೇಲೆ ಈಟಿ ಅಧಿಕಾರಿಗಳು ದಾಳಿ ಮಾಡಿದ್ದು, ಬಳಿಕ ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ನಾಗೇಂದ್ರ ಆಪ್ತ ಸಹಾಯ ಹರೀಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈ ವೇಳೆ ಹರೀಶ್ ನೀಡಿದ ಕೆಲ ಮಾಹಿತಿ ಆಧಾರದ ಮೇಲೆ ಶಾಸಕ ನಾಗೇಂದ್ರನ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!