ಬೆಳ್ತಂಗಡಿ: ಬೈಕ್ ಗೆ ಬೊಲೆರೋ ಡಿಕ್ಕಿ, ಬಾಲಕಿ ಮೃತ್ಯು
ಬೆಳ್ತಂಗಡಿ: ಮುಂಡಾಜೆ ಸೀಟು ಬಳಿ ನಡೆದ ಬೈಕ್–ಬೊಲೆರೋ ಅಪಘಾತದಲ್ಲಿ ಬಾಲಕಿ ಮೃತಪಟ್ಟಿದ್ದಾರೆ.
ಮಂಡಾಜೆ ಕಲ್ಮಂಜ ನಿವಾಸಿ ಗುರುಪ್ರಸಾದ್ ಹಾಗೂ ಅವರ ಪುತ್ರಿ ಅನರ್ಘ್ಯ(12) ಬೈಕ್ ನಲ್ಲಿ ಉಜಿರೆಯಿಂದ ಮನೆಗೆ ಹೊರಟಿದ್ದರು. ಮಾರ್ಗ ಮಧ್ಯ ಬೊಲೆರೋ ಹಿಂದಿನಿಂದ ಢಿಕ್ಕಿ ಹೊಡೆದು ಪರಾರಿಯಾಗಿದೆ.
ಘಟನೆಯಲ್ಲಿ ತಂದೆ ಮಗಳು ಇಬ್ಬರೂ ಗಾಯಗೊಂಡಿದ್ದರು. ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಅನರ್ಘ್ಯ ಬಳಿಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪರಾರಿಯಾಗಿದ್ದ ಬೊಲೆರೋ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.