ಕೇರಳ: ವಯನಾಡು ಭೂಕುಸಿತದಲ್ಲಿ ಮೃತರ ಸಂಖ್ಯೆ 30ಕ್ಕೆ ಏರಿಕೆ
ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ 30 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಲ್ಲಿ ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮೃತಪಟ್ಟಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಮೃತರಾಗಿದ್ದು ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.