ರಾಜ್ಯರಾಷ್ಟ್ರೀಯ

ವಯನಾಡು ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಿಗೆ 100 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಸಂಬಂಧಿಸಿ ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ಇರಲಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನಮ್ಮ ಬೆಂಬಲದ ಭರವಸೆ ನೀಡಿದ್ದೇನೆ. ಸಂತ್ರಸ್ತರಿಗೆ ಕರ್ನಾಟಕ 100 ಮನೆಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದೇನೆ. ಒಗ್ಗಟ್ಟಿನಿಂದ ನಾವು ಪುನರ್ ನಿರ್ಮಾಣ ಮಾಡುತ್ತೇವೆ ಮತ್ತು ಭರವಸೆಯನ್ನು ಪುನಃಸ್ಥಾಪಿಸುತ್ತೇವೆ ಎಂದು ಸಿದ್ದರಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!