ಕೈಕೊಟ್ಟ ಪ್ರೇಯಸಿ: ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ
ಪ್ರೇಯಸಿ ಕೈಕೊಟ್ಟ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್ ಕಾಲೋನಿಯಲ್ಲಿ ವರದಿಯಾಗಿದೆ. ಮಾನ್ವಿ ನಿವಾಸಿ ವರುಣ್ (26ವ)ಆತ್ಮಹತ್ಯೆಗೆ ಶರಣಾದ ಯುವಕ.
ವರುಣ್ ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರಿಂದ ಮನನೊಂದು ವರುಣ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಯುವಕ ಇನ್ಸ್ಟ್ರಾಗ್ರಾಂ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಸುತ್ತಿದ್ದ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.