ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ನನ್ನ ಬದುಕಿನಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಹೇಳಿದ್ದಾರೆ. ಆದರೆ, ಸಿದ್ದರಾಮಯ್ಯನವರು ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಆ.10ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ಜೆಡಿಎಸ್ ಪಾದಯಾತ್ರೆ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು ನೀವು ಹಿಂದುಳಿದ ವರ್ಗಗಳ ಮುಖ್ಯಮಂತ್ರಿ ಅಲ್ಲ, ನೀವು ಆರುವರೆ ಕೋಟಿ ಜನರನ್ನು ಪ್ರತಿನಿಧಿಸುವ ಮುಖ್ಯಮಂತ್ರಿ. ಆರುವರೆ ಕೋಟಿಯ ಜನರ ರಕ್ಷಣೆಯ ಜವಾಬ್ದಾರಿ ನಿಮಗಿದೆ. ಸಿದ್ದರಾಮಯ್ಯ ಕಪ್ಪು ಚುಕ್ಕೆ ಇಲ್ಲ ಕಪ್ಪು ಚುಕ್ಕೆ ಇಲ್ಲ ಅಂತಾರೆ. ಆದರೆ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಸಿಎಂ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ಸೈಟ್ ವಾಪಸ್ ಕೊಡಲು ಸಿದ್ಧ ಎಂದಿದ್ದಾರಂತೆ. ಸೈಟ್ ವಾಪಸ್ ಕೊಟ್ಟರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವಾ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದರು.