ವಯನಾಡಿನಲ್ಲಿ ಸಂತ್ರಸ್ತರನ್ನು ಭೇಟಿಯಾದ ಪ್ರಧಾನಿ ಮೋದಿ
ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಪ್ರದೇಶಕ್ಕೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಿ ನರೇಂದ್ರ ಮೋದಿಯವರು ನಂತರ ಅಲ್ಲಿ ಅಧಿಕಾರಿಗಳಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ಪ್ರಧಾನಿ ಮೋದಿಯವರೊಂದಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ಉಪಸ್ಥಿತರಿದ್ದರು.
ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದ ಪ್ರಧಾನಿ ಮೋದಿಯವರು ಸಂತ್ರಸ್ತರನ್ನು ಭೇಟಿ ಮಾಡಿ ಅವರ ಕಷ್ಟ, ನೋವುಗಳನ್ನು ಆಲಿಸಿದರು. ಸಂತ್ರಸ್ತರಿಗೆ ಸಾಂತ್ವನ ಹೇಳಿದ ಪ್ರಧಾನಿ, ಸರ್ಕಾರ ನಿಮ್ಮೊಂದಿಗಿದೆ ಎಂದು ಹೇಳಿದರು.
ಭೂಕುಸಿತದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾದ ಪುಂಚಿರಿಮಟ್ಟಂ, ಮುಂಡಕ್ಕೈ ಮತ್ತು ಚುರಲ್ಮಲಾಗಳ ಪರಿಸ್ಥಿತಿಯನ್ನು ಸಹ ಪರಿಶೀಲಿಸಿದರು. ಅಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಸಾವಿರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ.