ಚನ್ನಪಟ್ಟಣ ಉಪಚುನಾವಣೆ: ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನನಗೆ ನಂಬಿಕೆ ಇದೆ. ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯ ಮಳೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಇತಿಹಾಸವಿರುವ ವೀರಭದ್ರ ಹಾಗೂ ರುದ್ರೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ್ದೇನೆ ಎಂದರು. ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.