ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ದೂರು
ಬೆಳ್ತಂಗಡಿ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿರುವುದು ಮತ್ತು ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡುವಂತೆ ಪ್ರೇರೇಪಿಸುತ್ತಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಸಿಪಿಐಎಮ್ ಮುಖಂಡ ಬಿ.ಎಮ್ ಭಟ್ ದೂರು ನೀಡಿದರು. ಸ್ವಾತಂತ್ರ್ಯ ದಿನದಂದು ಸರಕಾರಿ ಅಧಿಕೃತ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಮಾಡಿರುವ ಭಾಷಣ ಇದೀಗ ವಿವಾದಕ್ಕೆ ಕಾರಣವಾಗಿದೆ.