ರಾಜಕೀಯರಾಜ್ಯ

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ: ಆ.19ರಂದು ಕಾಂಗ್ರೆಸ್ ಪ್ರತಿಭಟನೆ



ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ಗರಂ ಆಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಆಗಸ್ಟ್ 19ರಂದು ರಾಜ್ಯಾದ್ಯಂತ ಪ್ರತಿಭಟನೆ ಕರೆ ನೀಡಿದೆ.

ಡಿಕೆ ಶಿವಕುಮಾರ್

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಸಂವಿಧಾನ ವಿರೋಧಿಯಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿ ಖಂಡಿಸಿ ಆಗಸ್ಟ್ 19ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಪಕ್ಷದ ಎಲ್ಲಾ ಕಾರ್ಯಕರ್ತರು, ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!