ಬಸ್-ಕಾರು ಮಧ್ಯೆ ಭೀಕರ ಅಪಘಾತ, ನಾಲ್ವರು ಮೃತ್ಯು
ಗದಗ: ಸರಕಾರಿ ಬಸ್ ಹಾಗೂ ಕಾರಿನ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಹಾವೇರಿ ಮೂಲದವರು ಎಂದು ತಿಳಿದು ಬಂದಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.