ಸುಳ್ಯ ಬಸ್ ನಿಲ್ದಾಣದಲ್ಲಿ ಚಾರ್ಜ್’ಗೆ ಇಟ್ಟ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ವ್ಯಕ್ತಿ
ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣದಲ್ಲಿ ಚಾರ್ಜಿಂಗ್ ಗೆ ಇಟ್ಟಿದ್ದ ಮೊಬೈಲ್ ಫೋನ್ ಕಳ್ಳತನಕ್ಕೆ ಮುಂದಾದ ವ್ಯಕ್ತಿಯನ್ನು ಕಾಲೇಜ್ ವಿದ್ಯಾರ್ಥಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ನಡೆದಿದೆ.
ಸುಳ್ಯ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ತನ್ನ ಮೊಬೈಲ್ ಫೋನನ್ನು ಸುಳ್ಯದ ಕೆ.ಎಸ್ ಆರ್ ಟಿ ಸಿ ಬಸ್ ನಿಲ್ದಾನದಲ್ಲಿ ಚಾರ್ಜಿಗೆಂದು ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ ಮೊಬೈಲ್ ಫೋನ್ ಇಟ್ಟ ಸ್ಥಳದಲ್ಲಿ ಓರ್ವ ವ್ಯಕ್ತಿ ಸಂಶಯಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ ವಿಧ್ಯಾರ್ಥಿಗಳು ಆತನ ಚಲನ ವಲನವನ್ನು ತಮ್ಮ ಮೊಬೈಲ್ ಫೋನ್ ಮೂಲಕ ವಿಡಿಯೋ ಮಾಡಿ ಸೆರೆ ಹಿಡಿದಿದ್ದಾರೆ.
ಈ ಸಂಧರ್ಭ ಆತ ಮೊಬೈಲ್ ಅನ್ನು ಚಾರ್ಜಿಂಗ್ ಸೋಕೆಟ್ ನಿಂದ ಕಿತ್ತು ಜೇಬಿಗೆ ಹಾಕುವ ವೇಳೆ ವಿದ್ಯಾರ್ಥಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬಳಿಕ ವಿಚಾರಿಸಿದಾಗ ವಿದ್ಯಾರ್ಥಿಗಳ ಪ್ರಶ್ನೆಗೆ ಆತ ಕಕ್ಕಾ ಬಿಕ್ಕಿಯಾದ ಪ್ರಸಂಗವೂ ನಡೆಯಿತು.