ನೇಪಾಳದಲ್ಲಿ ನದಿಗೆ ಉರುಳಿದ 40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್
40 ಮಂದಿ ಭಾರತೀಯ ಪ್ರಯಾಣಿಕರಿದ್ದ ಬಸ್ ನೇಪಾಳದಲ್ಲಿ ನದಿಗೆ ಉರುಳಿ ಬಿದ್ದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ, ಅಪಘಾತದಲ್ಲಿ 14 ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಉಳಿದ ಪ್ರಯಾಣಿಕರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
40 ಜನರಿದ್ದ ಭಾರತೀಯ ಪ್ರಯಾಣಿಕರ ಬಸ್ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಬಿದ್ದಿದೆ ಎಂದು ವರದಿಯಾಗಿದ್ದು ಸುಮಾರು 40 ಮಂದಿ ಪ್ರಯಾಣಿಕರಿದ್ದ ಬಸ್ ಪೋಖರಾದಿಂದ ಕಠ್ಮಂಡು ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ.