ಕರಾವಳಿಕ್ರೈಂ

ಸರ್ವೆ: ಮನೆಗೆ ನುಗ್ಗಿ ಹಣ, ಚಿನ್ನ ದೋಚಿದ ಕಳ್ಳರು

ಪುತ್ತೂರು: ರಾತ್ರಿ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ನಡೆಸಿದ ಘಟನೆ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ಆ23ರಂದು ರಾತ್ರಿ ನಡೆದಿದೆ.

ಕಾಡಬಾಗಿಲು ನಿವಾಸಿ ಸಾರಮ್ಮ ಎಂಬವರು ತನ್ನ ಸೊಸೆ ಜೊತೆ ಆ24ರಂದು ಅನಾರೋಗ್ಯದಲ್ಲಿದ್ದ ಮೊಮ್ಮಗನನ್ನು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿಂದ ಅವರು ಸಂಬಂಧಿಕರ ಮನೆಗೆ ಹೋಗಿ ಅಲ್ಲಿ ಉಳಿದುಕೊಂಡಿದ್ದರು. ಆ.24ರಂದು ಮನೆಗೆ ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯ ಕಿಟಕಿಯ ಸರಳು ಮುರಿದು ಒಳನುಗ್ಗಿದ ಕಳ್ಳರು ಮನೆಯೊಳಗೆ ಕಪಾಟಿನಲ್ಲಿದ್ದ 3 ಪವನ್ ಚಿನ್ನ, 35 ಸಾವಿರ ನಗದು ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಕ್ರೈಂ ಎಸ್ ಐ ಸುಶ್ಮಾ ಜಿ.ಬಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!