ಮುಖ್ಯಮಂತ್ರಿಯನ್ನು ಭೇಟಿಯಾದ ಶಾಸಕ ಅಶೋಕ್ ರೈ: ಪುತ್ತೂರಿನ ಅಭಿವೃದ್ದಿ ಬಗ್ಗೆ ಚರ್ಚೆ
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಯವರು ಆ.24ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ.
ವಿಪರೀತ ಮಳೆಯಿಂದಾಗಿ ಪುತ್ತೂರು ಸೇರಿದಂತೆ ದ.ಕ ಜಿಲ್ಲೆಯಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಅನೇಕ ಕಡೆಗಳಲ್ಲಿ ಧರೆ ಕುಸಿದು ಮನೆಗಳು ಜಖಂಗೊಂಡಿದೆ. ಕೃಷಿ, ಆಸ್ತಿಪಾಸ್ತಿ ನಷ್ಟವುಂಟಾಗಿದ್ದು ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದ್ದಾರೆ.
ಮನವಿಗೆ ಸ್ಪಂಧಿಸಿದ ಮುಖ್ಯಮಂತ್ರಿಯವರು ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.