ಕ್ರೈಂಜಿಲ್ಲೆ

ಕಾರ್ಕಳ ಅತ್ಯಾಚಾರ ಪ್ರಕರಣ: ಮೂರನೇ ಆರೋಪಿ ಬಂಧನ- ಎಸ್ಪಿ

ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂರನೇ ಆರೋಪಿ ಅಭಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿ ಮತ್ತೆ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.

ಎಸ್ಪಿ ಡಾ. ಅರುಣ್ ಕುಮಾರ್

ಅಭಯ್‌, ಪ್ರಥಮ ಆರೋಪಿಯಾಗಿರುವ ಅಲ್ತಾಫ್‌ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಕೃತ್ಯ ಎಸಗಿದ ಬಳಿಕ ಆರೋಪಿಗೆ ತಪ್ಪಿಸಿಕೊಳ್ಳಲು ಕೂಡಾ ಈತ ಸಹಾಯ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಆರೋಪಿಯಿಂದ ಇನ್ನಷ್ಟು ಮಾಹಿತಿ ಪಡೆಯುವ ನಿಟ್ಟಿನಲ್ಲಿ ಕಸ್ಟಡಿಗೆ ಪಡೆಯಲಾಗುವುದು ಎಂದು ಉಡುಪಿ ಎಸ್‌.ಪಿ. ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ

Leave a Reply

Your email address will not be published. Required fields are marked *

error: Content is protected !!