ಕರಾವಳಿಕ್ರೈಂ

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ತೇಲಿ ಹೋದ ವ್ಯಕ್ತಿಯ ಮೃತದೇಹ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಕುರಿತು ಮಾಹಿತಿ ಲಭ್ಯವಾಗಿದೆ.

ಮೃತದೇಹವೊಂದು ನದಿಯಲ್ಲಿ ತೇಲಿ ಹೋಗುತ್ತಿರುವುದನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ ಈ ಬಗ್ಗೆ ಉಪ್ಪಿನಂಗಡಿ ದೇವಾಲಯದ ಬಳಿಯಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತೇಲಿ ಹೋಗಿರುವುದು ಗಂಡಸಿನ ಮೃತದೇಹ ಎಂದು ಶಂಕಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!