ಟಿ20 ಮಹಿಳಾ ಕ್ರಿಕೆಟ್ ವಿಶ್ವಕಪ್ ಭಾರತ ತಂಡ ಪ್ರಕಟ: ತಂಡಕ್ಕೆ ಮರಳಿದ ಕನ್ನಡತಿ ಶ್ರೇಯಾಂಕ ಪಾಟೀಲ್
ಅಕ್ಟೋಬರ್ 3 ರಿಂದ ಆರಂಭಗೊಳ್ಳಲಿರುವ ಮಹಿಳಾ ಟಿ20 ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ವಿಕೆಟ್ ಕೀಪರ್ಗಳಾಗಿ ರಿಚಾ ಘೋಷ್ ಹಾಗೂ ಯಾಸ್ತಿಕಾ ಭಾಟಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಏಷ್ಯಾಕಪ್ ಪಂದ್ಯಾವಳಿ ಮೇಲೆ ಗಾಯಗೊಂಡು ತಂಡದಿಂದ ಹೊರಗುಳಿದಿದ್ದ ಕರ್ನಾಟಕದ ಯುವ ಆಲ್ ರೌಂಡರ್ ಶ್ರೇಯಾಂಕಾ ಪಾಟೀಲ್ ತಂಡದಲ್ಲಿ ಸ್ಥಾನ ಪಡೆದಿದ್ದು, ಅದಕ್ಕೂ ಮುನ್ನ ಅವರು ಫಿಟ್ನೆಸ್ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ. ತಂಡದಲ್ಲಿ ವೇಗಿಗಳಾಗಿ ಪೂಜಾ ವಸ್ತ್ರಾಕರ್ ಹಾಗೂ ರೇಣುಕಾ ಸಿಂಗ್ ಠಾಕೂರ್ ಸ್ಥಾನ ಪಡೆದಿದ್ದು, ಸ್ಪಿನ್ನರ್ಗಳಾಗಿ ರಾಧಾ ಯಾದವ್ ಮತ್ತು ಆಶಾ ಸೋಭಾನ ಕಾಣಿಸಿಕೊಂಡಿದ್ದಾರೆ.