ಅರುಣ್ ಪುತ್ತಿಲಗೆ ಜಾಮೀನು ಮಂಜೂರು
ಪುತ್ತೂರು: ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ವಕೀಲರ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಹಿಳೆಯೋರ್ವರು ಅರುಣ್ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.